ಅರ್ಜಿ ಆಹ್ವಾನ

Published on

ಬಳ್ಳಾರಿ : ಸಂಡೂರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಡೂರು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಮೇ 03 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.

ಮಾಹಿತಿಗೆ ಸಂಡೂರು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08395-200073 ಗೆ ಸಂಪರ್ಕಿಸಬಹುದು ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net