ಬಳ್ಳಾರಿ : ಜಿಲ್ಲೆಯ ಕುರುಗೋಡು, ಕುರೆಕುಪ್ಪ, ಕುಡಿತಿನಿ, ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ 2.0 ಯೋಜನೆಯ ಐಇಸಿ ಘಟಕದಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಅರ್ಹ ಸ್ವ-ಸಹಾಯ ಗುಂಪುಗಳ ಸದಸ್ಯರುಗಳ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿವರ : ಸಂಡೂರು, ಕುಡಿತಿನಿ, ಕುರೆಕುಪ್ಪ ಮೇ.03 ಹಾಗೂ ಕುರುಗೋಡು ಮೇ.04 ರಂದು ಬೆಳಗ್ಗೆ 08 ಗಂಟೆಯಿಂದ ಮಧ್ಯಾಹ್ನ 01.30 ರವರೆಗೆ ಆಯಾ ಪುರಸಭೆ ಕಚೇರಿಯಲ್ಲಿ ಸಲ್ಲಿಸಬಹುದು. ಮಾಹಿತಿಗೆ ಸಂಬಂಧಪಟ್ಟ ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------