ಅರ್ಜಿ ಆಹ್ವಾನ

Published on

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಸತಿರಹಿತ ಮೀನುಗಾರರಿಗೆ ಸರ್ಕಾರದ ಮತ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕಂಪ್ಲಿ, ಸಿರಗುಪ್ಪ, ಸಂಡೂರು, ಬಳ್ಳಾರಿ ನಗರ ಹಾಗೂ ಗ್ರಾಮೀಣಕ್ಕೆ ತಲಾ 25 ಸೇರಿ ಒಟ್ಟು 125 ಮನೆಗಳನ್ನು ಹಂಚಿಕೆ ಮಾಡಲಾಗುವುದು.

ಆಯಾ ತಾಲೂಕುಗಳಲ್ಲಿ ಅರ್ಜಿಗಳು ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ಇದೇ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕ ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net