ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯಲು ಇಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಬೆಳೆಗಳಾದ ಮಾವು ಸಪೋಟ, ಅಂಜೂರ, ನುಗ್ಗೆ, ಬಾಳೆ, ಪಪ್ಪಾಯ, ಸೀಬೆ, ನಿಂಬು, ಕರಿಬೇವು, ತೆಂಗು ಹೊಸ ಪ್ರದೇಶ ವಿಸ್ತರಣೆ, ಕೃಷಿ ಹೊಂಡ, ಬದು ನಿರ್ಮಾಣ ಹಾಗೂ ಇತರೆ ಅನುಷ್ಠಾನ ಕಾಮಗಾರಿಗಳನ್ನು ಕೈಗೊಳ್ಳಲು ಇಚೈಸುವ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ. ಮಾಹಿತಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು.