ಬಳ್ಳಾರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಜೂ 21 ಕೊನೆ ದಿನಾಂಕವಾಗಿದೆ. ಮಾಹಿತಿಗೆ ಕಚೇರಿ ಅಥವಾ ದೂ. 08392-200125/224 ಗೆ ಸಂಪರ್ಕಿಸಬಹುದು.
====