ಸಮಯಕ್ಕೆ ಪೂರಕವಾಗಿ ಬಸ್ ಕಲ್ಪಿಸಿ

Published on

ಬಳ್ಳಾರಿ : ಜಿಲ್ಲೆಯ ವಿವಿಧ ಗ್ರಾಮಗಳಿಂದ ಶಾಲಾ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬಸ್‌ಗಳ ಸಮಸ್ಯೆಯಾಗದಂತೆ ಅನುಕೂಲ ಮಾಡಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದೆ. ಹಾಗಾಗಿ ಅವರ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಹಾಗೂ ಶಾಲಾ ಸಮಯ ನಿಗದಿಯಂತೆ ಬಸ್ ಸಂಚಾರ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ-ಸಂಚಾರ ವ್ಯವಸ್ಥೆ ಕಲ್ಪಿಸಲು ಉದ್ದೇಶ ಹೊಂದಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ವಾಹನ ಚಾಲನಾ ಸಿಬ್ಬಂದಿ ದುಪ್ಪಟ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಜತೆಗೆ ಬಸ್ ಗಳ ಟ್ರಿಪ್‌ಗಳ ಸಂಖ್ಯೆಯೂ ಹೆಚ್ಚಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net