ಬಳ್ಳಾರಿ : ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸ್ಪಂದನದಲ್ಲಿ ಕಾರ್ಯ ನಿರತರಾಗಿದ್ದ ಇಲ್ಲಿನ ಎಪಿಎಂಸಿ ಠಾಣಾ ಎಎಸ್‌ಐ ಶ್ರೀನಿವಾಸ್‌ರಾವ್ (52) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಇಲ್ಲಿನ ನೂತನ ಡಿಸಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಶ್ರೀನಿವಾಸ್‌ರಾವ್ ಅಸ್ವಸ್ಥಗೊಂಡಿದ್ದರು. ಕೂಡಲೇ ಚಿಕಿತ್ಸೆಗಾಗಿ ಬಿಮ್ಸ್‌ಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎಸ್ಪಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.