ಬಳ್ಳಾರಿ : ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಅ. 29 ರಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಪಂ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್.ಸರಳಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉದ್ಘಾಟಿಸುವರು. ನಗರ ಶಾಸಕ ನಾರಾ ಭರತ್ ರೆಡ್ಡಿ ಅ ಅಧ್ಯಕ್ಷತೆ ವಹಿಸುವರು ಹಾಗೂ ಇತರೆ ಎಲ್ಲ ಅಧಿಕಾರಿಗಳು ಉಪಸ್ಥಿತರಲಿದ್ದಾರೆ.
-------