ಬಸವನಕುಂಟೆ ಕೆರೆ ಮುಚ್ಚಲು ಸೂಚನೆ

300722 Ramulu Visit Muncipal Hight School
ಬಳ್ಳಾರಿಯ ಮುನ್ಸಿಪಲ್ ಹೈಸ್ಕೂಲ್‌ಗೆ ಭೇಟಿ ನೀಡಿ ಶಾಲೆಯ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪರಿಸಿಲಿದರು.
Published on

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ವಿವಿಧ ಅಧಿಕಾರಿಗಳ ಜತೆಗೂಡಿ ಶನಿವಾರ ನಗರದ ಪ್ರದಕ್ಷಿಣೆ ನಡೆಸಿದರು. ನಗರದ ಮುನ್ಸಿಪಲ್ ಹೈಸ್ಕೂಲ್‌ಗೆ ಭೇಟಿ ನೀಡಿ ಹೈಸ್ಕೂಲ್ ಕಟ್ಟಡಗಳನ್ನು ಮತ್ತು ಶಾಲಾ ಕೊಠಡಿಗಳು ಹಾಗೂ ಶಾಲಾ ಮಕ್ಕಳು ಕುಳಿತುಕೊಳ್ಳುತ್ತಿದ್ದ ಬೆಂಚ್‌ಗಳನ್ನು ಪರಿಶೀಲಿಸಿದರು. ಜತೆಗೆ ವಿದ್ಯಾರ್ಥಿಗಳು ಅಹವಾಲು ಆಲಿಸಿದರು. ತಾರಾನಾಥ ಆಸ್ಪತ್ರೆಯನ್ನೂ ಪರಿಶೀಲನೆ ನಡೆಸಿದರು.

ಬಸವನಕುಂಟೆ ಕೆರೆಯಲ್ಲಿನ ಮಲೀನ ನೀರು ತೆಗೆದು ಅದನ್ನು ಸಂಪೂರ್ಣವಾಗಿ ಮುಚ್ಚಿ, ಅದನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ ವಾಕಿಂಗ್‌ಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು. ಅದೇ ರೀತಿಯಲ್ಲಿ ಕಾರ್ಕಲಕುಂಟ ಕೆರೆಗೂ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿಪಡಿಸಲು ತಿಳಿಸಿದರು. ಬಳಿಕ ಶಿವಲಿಂಗ ನಗರದಲ್ಲಿ ಚರಂಡಿ ಸ್ವಚ್ಛತೆ ಸೇರಿದಂತೆ ಈ ಪ್ರದೇಶ ಸಂಪೂರ್ಣ ಸ್ವಚ್ಛಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು. ಪಾರ್ವತಿ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್, ಶಾಲಾ ಕಟ್ಟಡ ಪರಿಶೀಲಿಸಿ ವಿದ್ಯಾರ್ಥಿಗಳ ಅಹವಾಲು ಆಲಿಸಿದರು. ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಮಾಜಿ ಸಂಸದೆ ಜೆ.ಶಾಂತಾ, ಬುಡಾ ಅಧ್ಯಕ್ಷ ಪಾಲನ್ನ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಹಾಗೂ ಅಧಿಕಾರಿಗಳು, ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net