ಬಳ್ಳಾರಿ : ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿ ಮೆರಿಟ್ ಆಧಾರದ ಮೇಲೆ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ. ಮಧ್ಯವರ್ತಿಗಳಿಂದ ಜಾಗೃತರಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಮಧ್ಯವರ್ತಿಗಳು ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಕೊಡಿಸುವುದಾಗಿ ಹಣ ಕೇಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿದಲ್ಲಿ ತಾವೇ ನೇರ ಜವಾಬ್ದಾರರಾಗಿರುತ್ತೀರಿ.
======