ಗ್ಯಾರಂಟಿಗಳಿಂದ ಜನರಿಗೆ ಅನುಕೂಲ

Published on

ಬಳ್ಳಾರಿ : ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರೆಂಟಿ ಯೋಜನೆಗಳಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ಬಹಳ ಉಪಯೋಗವಾಗುತ್ತಿವೆ ಎಂದು ಸಂಗನಕಲ್ಲು ಗ್ರಾಮದ ಹಿರಿಯ ಮುಖಂಡ ಪಂಪನಗೌಡ ಹೇಳಿದರು.

ತಾಲೂಕಿನ ಸಂಗನಕಲ್ಲು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಚಿಗುರು ಕಲಾತಂಡದಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಅತ್ಯಂತ ಮೆಚ್ಚುಗೆಯಾದ ಶಕ್ತಿ ಯೋಜನೆಯಡಿ ಬಸ್ ಪ್ರಯಾಣ, ಪ್ರತಿ ತಿಂಗಳು ಗೃಹ ಒಡತಿಯರಿಗೆ 2 ಸಾವಿರ ರೂ., ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ, ಯುವ ನಿಧಿ ಯೋಜನೆಗಳಿಂದ ಅನುಕೂಲವಾಗುತ್ತಿದೆ ಎಂದರು. ಗ್ರಾಪಅ ಹಂತದಲ್ಲಿ ಸರ್ಕಾರದ ಯೋಜನೆಗಳನ್ನು ಬೀದಿ ನಾಟಕ ಮೂಲಕ ತಿಳಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂಬ ಅರಿವು ಮೂಡುತ್ತದೆ. ಇದರಿಂದ ಸರ್ಕಾರದ ಯೋಜನೆಗಳು ಪಡೆದುಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net