ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣತೊಡಿ

Published on

ಬಳ್ಳಾರಿ : ಪ್ರತಿಯೊಬ್ಬ ವಿದ್ಯಾರ್ಥಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣತೊಡಬೇಕು ಎಂದು ಪ್ರಾಂಶುಪಾಲ ಡಾ. ಎಚ್.ರಾಮಕೃಷ್ಣ ಹೇಳಿದರು.

ತಾಲೂಕಿನ ತೆಕ್ಕಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಜಿಲ್ಲಾ ನೆಹರು ಯುವಕೇಂದ್ರ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭವಿಷ್ಯದಲ್ಲಿ ಸದೃಢ ದೇಶ ಕಟ್ಟುವಲ್ಲಿಯುವಕರ ಪಾತ್ರ ಮುಖ್ಯ. ಹಾಗಾಗಿ ಪ್ರತಿಯೊಬ್ಬ ಯುವಕರು ಮಾನವಿಯ ಮೌಲ್ಯ ಅಳವಡಿಸಿಕೊಂಡು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಂಬಿಕೆ, ವಿಶ್ವಾಸದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ನೆಹರೂ ಯುವಕೇಂದ್ರದ ಅಧಿಕಾರಿ ಮೊಂಟು ಪಟಾರ್ ಮಾತನಾಡಿ, ಯುವ ಸಂಸತ್ತು ಸ್ಪರ್ಧೆಯು ವಿದ್ಯಾರ್ಥಿಗಳು ರಾಜಕೀಯ ಚರ್ಚೆಯಲ್ಲಿ ಪಾಲ್ಗೊಳ್ಳಲು ಅನುಕೂಲಕರವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ಹೊಸ ಆಲೋಚನೆಗಳಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ರಾಜ್ಯ ಮಕ್ಕಳ ಹಕ್ಕು ಆಯೋಗದ ಮಾಜಿ ಸದಸ್ಯ ಡಾ. ಎಚ್‌ಸಿ.ರಾಘವೇಂದ್ರ ಮಾತನಾಡಿ, ನೈತಿಕ ಮೌಲ್ಯಗಳ ಬೆಳವಣಿಗೆಯನ್ನು ವಿದ್ಯಾರ್ಥಿಗಳು ಯುವ ಸಂಸತ್ತಿನ ನಾಯಕರಾಗುವ ಮೂಲಕ ಮೈಗೂಡಿಸಿಕೊಳ್ಳಬೇಕು ಎಂದರು.

ತೆಕ್ಕಲಕೋಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಅಧ್ಯಕ್ಷ ತೆ ವಹಿಸಿ ಮಾತನಾಡಿ, ವಿಕಸಿತ ಭಾರತ ಯೋಜನೆಯು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಜನೆಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಎನ್ನೆಸ್ಸೆಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಕುಮಾರ್, ಡಾ.ಶಾಂತಲಾ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ಎ.ಎಸ್.ಬಸವರಾಜ, ಮುರುಳಿಶಂಕರಗೌಡ, ಡಾ.ಶಶಿಕಾಂತ್, ಡಾ.ಚಂದ್ರಕಾಂತ್ ಹಾಗೂ ಅಧ್ಯಾಪಕರು, ಸ್ಪರ್ಧಾರ್ಥಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net