ಹಕ್ಕಿಜ್ವರ ಸಾಂಕ್ರಾಮಿಕ ರೋಗವಲ್ಲ

Published on

ಬಳ್ಳಾರಿ ; ಕೋಳಿ ಶೀತ(ಹಕ್ಕಿ ಜ್ವರ) ಜ್ವರವು ಸಾಂಕ್ರಾಮಿಕ ರೋಗವಲ್ಲ. ಜನರು ಯಾವುದೇ ರೀತಿಯಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಹೇಳಿದರು.

ತಾಲೂಕಿನ ಕಪ್ಪಗಲ್ ಗ್ರಾಮದ ಕೋಳಿ ಫಾರಂ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಸಾರ್ವಜನಿಕರು ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು ಎಂದರು.

ಬಳಿಕ ಸಾಕಾಣಿಕೆ ಕೇಂದ್ರ(ಕೋಳಿ ಫಾರಂ)ದ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮಾಲೀಕರಿಗೆ ನಿರ್ದೇಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net