ಬಳ್ಳಾರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ನಾಳೆ, ಚನ್ನಬಸವನಗೌಡ 2ನೇ ಬಾರಿಗೆ ಅಧಿಕಾರ ಸ್ವೀಕಾರ

Channabasanagouda Patil
Published on

ಬಳ್ಳಾರಿ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮರು ಆಯ್ಕೆಯಾಗಿರುವ ಚನ್ನಬಸವನಗೌಡ ಪಾಟೀಲ್ ಫೆ.8ರಂದು ಪದಗ್ರಹಣ ಮಾಡಲಿದ್ದಾರೆ. ರಾಜ್ಯದಲ್ಲಿ ಚನ್ನಬಸವನಗೌಡ ಪಾಟೀಲ್ ಮಾತ್ರ ಜಿಲ್ಲಾ ಅಧ್ಯಕ್ಷರಾಗಿ ಮತ್ತೆ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲೂ ಇದುವರೆಗೆ ಯಾರಿಗೂ ಜಿಲ್ಲಾಧ್ಯಕ್ಷ ಸ್ಥಾನ ಎರಡನೇ ಬಾರಿಗೆ ನೀಡಿರಲಿಲ್ಲ.

ನಗರದ ಬಸವ ಭವನದಲ್ಲಿ ಫೆ.8ರಂದು ಬೆಳಗ್ಗೆ 11.30ಕ್ಕೆ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಸಚಿವರಾದ ಬಿ.ಶ್ರೀರಾಮುಲು, ಆನಂದ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮರು ಆಯ್ಕೆಗೊಂಡಿರುವ ನಳಿನ್ ಕುಮಾರ್ ಕಟೀಲ್ ಹಾಗೂ ನೂತನ ಸಚಿವ ಆನಂದಸಿಂಗ್‌ರನ್ನು ಸನ್ಮಾನಿಸಲಾಗುತ್ತದೆ. ಬೆಳಗ್ಗೆ 11ಕ್ಕೆ ಅನಂತಪುರ ರಸ್ತೆಯಲ್ಲಿರುವ ತಾರಾನಾಥ ಆಯುರ್ವೇದಿಕ್ ಕಾಲೇಜಿನಿಂದ ಬಸವ ಭವನದವರೆಗೆ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಹರಿಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net