ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್

Bellary Bund
Published on

ಬಳ್ಳಾರಿ: ಜಿಲ್ಲೆ ವಿಭಜನೆ ವಿರೋಧಿಸಿ ಅಖಂಡ ಜಿಲ್ಲಾ ಹೋರಾಟ ಸಮಿತಿಯಿಂದ ನಗರ ಬಂದ್​ಗೆ ಕರೆ ನೀಡಿದೆ.

ಬೆಳಗ್ಗೆಯಿಂದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ. ಕನ್ನಡ, ರೈತ ಪರ, ಸಾಂಸ್ಕೃತಿಕ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬಂದ್​ನಲ್ಲಿ ಭಾಗವಹಿಸಿದ್ದಾರೆ. ಜನಸೈನ್ಯ ಸಂಘಟನೆಯಿಂದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಉರುಳು ಸೇವೆ ನಡೆಸಲಾಯಿತು.

ಸಂಜೆ 6ರವರೆಗೆ ಬಂದ್ ಬೆಂಬಲಿಸುವಂತೆ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದ್ದಾರೆ. ಗಡಿಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ನಗರದಲ್ಲಿ ಭದ್ರತೆಗೆ ಮೂರು ಜನ ಡಿವೈಎಸ್ಪಿ, 10 ಇನ್ಸ್ಪೆಕ್ಟರ್, 18 ಪಿಎಸ್ಐ, 40 ಎಎಸ್ಐ, 200 ಪೇದೆಗಳು, ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net