ಸಿ.ಟಿ. ರವಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಿ

Published on

ಬಳ್ಳಾರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವಾಚ್ಯ ಪದ ಬಳಿಸಿ ನಿಂದನೆ ಮಾಡಿರುವುದು ನಿಜಕ್ಕೂ ಖಂಡಿನಿಯವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ ಆಗ್ರಹಿಸಿದರು.

ಇಲ್ಲಿನ ರಾಯಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕೇಂದ್ರ ಸಚಿವ ಅಮಿತ್ ಷಾ ರಾಜೀನಾಮೆ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಖಂಡಿಸಿ ಪ್ರತಿಭಟನೆ ನಡೆಸಿ ಮಾತನಾಡಿದರು. ಮನಸ್ಮತಿಗೆ ಬೆಲೆ ನೀಡುವ ಬಿಜೆಪಿಗೆ ಭಾರತೀಯ ಸಂವಿಧಾನ ಮತ್ತು ಅದನ್ನು ರಚಿಸುವಲ್ಲಿ ಪ್ರಮುಖಪಾತ್ರ ವಹಿಸಿದ ಅಂಬೇಡ್ಕರ್ ಅವರ ಬಗ್ಗೆ ಇರುವ ನಿಜವಾದ ಅಭಿಪ್ರಾಯವನ್ನು ಅಮಿತ್ ಷಾ ಹೊರಹಾಕಿದ್ದಾರೆ ಎಂದು ಅಕ್ರೋಶ ಹೊರಹಾಕಿದರು.

ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿ, ದೇಶದ ಪ್ರಮುಖ ಹುದ್ದೆಯಲ್ಲಿ ಒಂದಾಗಿರುವ ಗೃಹ ಸಚಿವ ಸ್ಥಾನದಲ್ಲಿದ್ದುಕೊಂಡು, ಸಂವಿಧಾನದ ನಿರ್ಮಾತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆ ಕಲಾಪದಲ್ಲಿ ಕೀಳಾಗಿ ಮಾತನಾಡುವ ಮೂಲಕ ಅಮಿತ್ ಷಾ ಅವರು ರಾಷ್ಟ್ರದ್ರೋಹ ಕೃತ್ಯ ಎಸಗಿದ್ದಾರೆ. ಇವರ ಮೇಲೆ ಕೂಡಲೇ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಅವರು, ದಲಿತರು, ಆದಿವಾಸಿಗಳು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರ ದಾರಿ ದೀಪವಾಗಿದ್ದಾರೆ. ಬಿಜೆಪಿಯು ಭಾರತೀಯ ಸಂವಿಧಾನಕ್ಕಿಂತ ಆರ್‌ಎಸ್‌ಎಸ್ ಮನುವಾದಕ್ಕೆ ಆದ್ಯತೆ ನೀಡಿದೆ. ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸಿದ ಷಾ, ಈ ಹಿಂದೆ ಗುಜರಾತ್ ರಾಜ್ಯದಿಂದ ಗಡಿಪಾರು ಆದವರು. ಇವರಿಗೆ ಅಂಬೇಡ್ಕರ್ ಅವರ ಹೆಸರು ಹೇಳುವ ನೈತಿಕತೆಯೇ ಇಲ್ಲ. ಗಡಿಪಾರಾಗಿ ಬಂದಂತಹ ವ್ಯಕ್ತಿಗೆ ಕೇಂದ್ರ ಸಚಿವ ಸ್ಥಾನ ನೀಡಿರುವುದೇ ತಪ್ಪು ಎಂದು ಕಿಡಿ ಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net