

ಬಳ್ಳಾರಿ: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರುದ್ಧ ಹೋರಾಟ ನಡೆಸಲು ಸಿಪಿಐ ಸಜ್ಜಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಸಾಥಿ ಸುಂದರೇಶ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆರ್ಥಿಕತೆ ಕುಸಿದಿದ್ದು, ಸರ್ಕಾರ ಬಂಡವಾಳಶಾಹಿ ಪರವಾಗಿದೆ. ಮುಖೇಶ್ ಅಂಬಾನಿ, ಕರೊನಾ ಸಮಯದಲ್ಲಿ ಶ್ರೀಮಂತರ ಪಟ್ಟಿಯಲ್ಲಿ ಏಷ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದರು. ಆದರೆ, ಕರೊನಾ ಲಾಕ್‌ಡೌನ್ ಬಳಿಕ ವಿಶ್ವದಲ್ಲಿ 11ನೇ ಸ್ಥಾನದಲ್ಲಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಇತ್ತೀಚಿನ ದಿನಗಳಲ್ಲಿ ರೈಲು ನಿಲ್ದಾಣ, ರೈಲುಗಳು, ವಿದ್ಯುತ್, ಕಲ್ಲಿದ್ದಲು ಘಟಕಗಳು, ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ವಿವಿಧ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಜನ ಸಾಮಾನ್ಯರ ಬದುಕು ಬೀದಿಗೆ ಬೀಳಲಿದೆ ಎಂದು ಆರೋಪಿಸಿದರು.
ಪಕ್ಷ ವಿರೋಧಿ ಚಟುವಟಿಕೆ ಹಾಗೂ ಕಾರ್ಯಕರ್ತೆಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣದಿಂದ ಜಿಲ್ಲಾ ಸಮಿತಿ ಸದಸ್ಯ ಎ.ಆರ್.ಎಂ.ಇಸ್ಮಾಯಿಲ್ ಅನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಮತ್ತು ನೂತನ ವಿಜಯನಗರ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ಎಚ್.ಎ. ಆದಿಮೂರ್ತಿಯನ್ನು ಜಿಲ್ಲಾ ಸಂಚಾಲಕರಾಗಿ ನೇಮಿಸಲಾಗಿದೆ ಎಂದರು.
ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ೆಡರೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎ. ವಿಜಯಭಾಸ್ಕರ್ ಮಾತನಾಡಿ, ಮುಷ್ಕರದ ಸಂದರ್ಭದಲ್ಲಿ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳುವಂತೆ ಸಾರಿಗೆ ಸಚಿವ ಶ್ರೀರಾಮುಲು ಹೇಳಿದರೂ ಬಿಎಂಟಿಸಿ ಅಧಿಕಾರಿಗಳು ಗಮನ ಹರಿಸದೆ, ಮುಖ್ಯಮಂತ್ರಿಗಳ ವಿವೇಚನೆಗೆ ನೀಡಿದ್ದಾರೆ. ಆದ್ದರಿಂದ ಸಿಎಂ ಕೂಡಲೇ ಸಭೆ ನಡೆಸಿ, ಮರು ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ೆಡರೇಷನ್ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬಾರಾವ್, ಉಪಾಧ್ಯಕ್ಷ ಟಿ.ಚನ್ನಪ್ಪ, ಜಂಟಿ ಕಾರ್ಯದರ್ಶಿ ಜಿಲ್ಲಾ ಕಾರ್ಯದರ್ಶಿ ಕೆ.ನಾಗಭೂಷಣ ರಾವ್ ಇದ್ದರು.