ಬಳ್ಳಾರಿ: ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು ಡಿ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಡಿ.22 ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನ ಗಿರಿನಗರ ನಿವಾಸದಿಂದ ಹೊರಟು ಜಿಲ್ಲೆಗೆ ಆಗಮಿಸಿ, ಬೆಳಗ್ಗೆ 9 ಗಂಟೆಗೆ ನಗರದ ಅಲ್ಲಂ ವನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ 10 ಗಂಟೆಗೆ ನಿರ್ಗಮಿಸಿ, 10.30 ಗಂಟೆಗೆ ತಾಲೂಕಿನ ಹಗರಿಯ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡುವರು ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.