ಶಾಲಾ ಅವರಣ ಸ್ವಚ್ಛತೆಗೊಳಿಸಿ

Published on

ಬಳ್ಳಾರಿ : ಡೆಂೆ ರೋಗ ನಿಯಂತ್ರಣಕ್ಕೆ ಶಿಕ್ಷಕರ ಪಾತ್ರವು ಮುಖ್ಯವಾಗಿದ್ದು, ಶಾಲೆ ಆವರಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಡಿಎಚ್‌ಒ ಡಾ.ವೈ. ರಮೇಶಬಾಬು ಹೇಳಿದರು.

ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ 41 ಶಾಲೆಗಳ ವಿಜ್ಞಾನ ನೋಡಲ್ ಶಿಕ್ಷಕರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭಗೊಂಡಿದೆ. ಅದೇ ರೀತಿಯಾಗಿ ಶಾಲೆಗಳು ಸಹ ಪ್ರಾರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾಲಾ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲ ಆರೋಗ್ಯ ಕೆಂದ್ರಗಳಲ್ಲಿ ರಕ್ತ ಪರೀಕ್ಷೆ ಮೂಲಕ ಮಲೇರಿಯಾ, ಡೆಂೆ ರೋಗ ಪತ್ತೆ ಹಚ್ಚುವ ಹಾಗೂ ಪ್ಲೆಟ್‌ಲೇಟ್ಸ್, ಸಿಬಿಸಿ, ಎಚ್‌ಬಿ ಮುಂತಾದವುಗಳ ಪರೀಕ್ಷೆ ಹಾಗೂ ಬೆಳಗಿನ ಅವಧಿಯಲ್ಲಿ ಉಪಹಾರ ಪೂರ್ವ ರಕ್ತ ಪರೀಕ್ಷೆ ಮಾಡಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಿದ್ದು, ಸಾರ್ವಜನಿಕರಿಗೆ ಇದರ ಸದುಪಯೋಗಕ್ಕಾಗಿ ವ್ಯಾಪಕ ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net