ಜು.29ರಂದು ಸಿಎಂ ನಿವಾಸ, ಡಿಸಿ ಕಚೇರಿಗಳಿಗೆ ಮುತ್ತಿಗೆ: ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿಕೆ

Asha Workers Protest
Published on

ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಹೋರಾಟ ಜು.29ಕ್ಕೆ 20 ದಿನ ಪೂರೈಸಲಿರುವ ಹಿನ್ನೆಲೆಯಲ್ಲಿ ಅಂದು ಸಿಎಂ ಮನೆ ಸೇರಿ ಆಯಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಲವು ಸಂಕಷ್ಟಗಳಲ್ಲಿ ಆಶಾ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದರೂ ಕರೊನಾ ಸುರಕ್ಷತಾ ಕಿಟ್ ವಿತರಿಸಿಲ್ಲ. ಸಮರ್ಪಕ ವೇತನವಿಲ್ಲ. ಇಂತಹ ಹಲವು ಸಮಸ್ಯೆಗಳು ಬಾಧಿಸುತ್ತಿದ್ದು, ಈಡೇರಿಸುವಂತೆ ಸರ್ಕಾರಕ್ಕೆ ಹಲವು ದಿನಗಳಿಂದ ಒತ್ತಾಯಿಸುತ್ತಿದ್ದರೂ ಸ್ಪಂದಿಸುತ್ತಿಲ್ಲ. ಹೀಗಾಗಿ 16ದಿನಗಳಿಂದ ಕೆಲಸ ತ್ಯಜಿಸಿ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದಾರೆ. ಆದರೆ, ಈವರೆಗೆ ಸರ್ಕಾರ ಮಾತುಕತೆಗೆ ಮುಂದಾಗದ ಹಿನ್ನೆಲೆಯಲ್ಲಿ ಮುತ್ತಿಗೆ ಹಾಕಲು ತಿರ್ಮಾನಿಸಲಾಗಿದೆ ಎಂದರು.

ಸಂಘದ ಉಪಾದ್ಯಕ್ಷ ಎ.ದೇವದಾಸ್, ಜಿಲ್ಲಾ ಗೌರವಾಧ್ಯಕ್ಷೆ ಎ.ಶಾಂತಾ, ಕಾರ್ಯದರ್ಶಿ ಗೀತಾ, ನಗರ ಅಧ್ಯಕ್ಷೆ ರಾಮಕ್ಕ, ಕಾರ್ಯದರ್ಶಿ ರೇಷ್ಮಾ, ರಾಜೇಶ್ವರಿ, ಅಂಬಿಕಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net