ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಅವರು ಮೇ 16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.50 ಕ್ಕೆ ತೋರಣಗಲ್‌ನ ಜಿಂದಾಲ್‌ನ ಏರ್‌ಸ್ಟಿಪ್ ಗೆ ಆಗಮಿಸುವರು.
ವಿಜಯನಗರ ಜಿಲ್ಲೆಯ ಹೊಸಪೇಟೆಗೆ ತಲುಪಿ ಮೇ 20 ರಂದು ರಾಜ್ಯ ಸರ್ಕಾರವು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿರುವ ಸ್ಥಳ ಪರಿಶೀಲನೆ ನಡೆಸುವರು. 02.15 ಕ್ಕೆ ವಿಶೇಷ ವಿಮಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಸುವರು ಎಂದು ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ.ಚಿರಂಜೀವಿ ತಿಳಿಸಿದ್ದಾರೆ.