ಕ್ರೀಡೆಗಳಿಗೆ ಸ್ಪರ್ಧಾ ಮನೋಭಾವ ಮುಖ್ಯ

Published on

ಬಳ್ಳಾರಿ : ಕ್ರೀಡೆಗಳಲ್ಲಿ ಭಾಗವಹಿಸಲು ಸ್ಪರ್ಧಾ ಮನೋಭಾವ ಮುಖ್ಯ . ವಿದ್ಯಾರ್ಥಿಗಳು ಸಕ್ರಿಯವಾಗಿ ಇಂತಹ ಚಟುವಟಿಕೆಗಳಲ್ಲಿ ತಮ್ಮನ್ನು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು ಎಂದು ಸರಳಾದೇವಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಹ್ಲಾದ ಚೌದರಿ ಹೇಳಿದರು.

ನಗರದ ಶ್ರೀಮತಿ ಸರಳಾದೇವಿ ಕಾಲೇಜಿನ ಆವರಣದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ಅಂತರ್ ಮಹಾವಿದ್ಯಾಲಯಗಳ ಪುರುಷ ಮತ್ತು ಮಹಿಳೆಯರ ಕಬ್ಬಡಿ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡಗಳ ಆಯ್ಕೆಯ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಬರೀ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಬಾರದು. ಪಠ್ಯತೇರ ಚಟುವಟಿಕೆಗಳಲ್ಲಿ ಆಸಕ್ತಿಯನ್ನು ತೋರಿಸಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದರು.

ಬಳ್ಳಾರಿ, ವಿಜಯನಗರ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪಂದ್ಯಾವಳಿಯಲ್ಲಿ ಉತ್ತಮ ರೈಡ್ ಗಳನ್ನು ಮಾಡುವ ಮೂಲಕ‌ ಗಮನ ಸೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net