ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ಸುರೇಶ ಕುಮಾರ್ ಸೂಚನೆ

121220 Ballari Election Observer Meeting
ಬಳ್ಳಾರಿ ತಹಸಿಲ್ ಕಚೇರಿಯಲ್ಲಿ ಶನಿವಾರ ಜಿಲ್ಲಾ ಗ್ರಾಪಂ ಚುನಾವಣಾ ವೀಕ್ಷಕ ಸುರೇಶ ಕುವಾರ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.
Published on

ಬಳ್ಳಾರಿ: ಗ್ರಾಪಂ ಚುನಾವಣೆಗಳನ್ನು ಶಾಂತಿ ಮತ್ತು ಸುಸೂತ್ರ ನಡೆಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ಸುರೇಶ ಕುಮಾರ್ ಸೂಚಿಸಿದರು.

ನಗರದ ತಹಸಿಲ್ ಕಚೇರಿಯಲ್ಲಿ ಶನಿವಾರ ಬಳ್ಳಾರಿ ತಾಲೂಕಿನ ಗ್ರಾಪಂ ಚುನಾವಣಾ ಸಿದ್ಧತೆ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ವಾತನಾಡಿದರು. ತಾಲೂಕಿನಲ್ಲಿ 261 ಮತಗಟ್ಟೆಗಳ ಪೈಕಿ 40 ಅತಿ ಸೂಕ್ಷ್ಮ ಮತ್ತು 71 ಸೂಕ್ಷ್ಮ ಮತಗಟ್ಟೆಗಳಿವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಂದೋಬಸ್ತ್ ಜತೆಗೆ ವಿಡಿಯೋ ಚಿತ್ರೀಕರಣ ಮಾಡಬೇಕು. ಪ್ರತಿ ಮತಗಟ್ಟೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಯಾವುದೇ ದೂರುಗಳಿಗೆ ಅಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ರೌಡಿಶೀಟರ್‌ಗಳು ಮತ್ತು ಚುನಾವಣೆ ನೆಪದಲ್ಲಿ ಪ್ರಚೋದನೆ ನೀಡಿ ಕೆಟ್ಟ ವಾತಾವರಣ ಸೃಷ್ಟಿಸುವವವರನ್ನು ಗುರುತಿಸಿ ಕ್ರಮಕೈಗೊಳ್ಳಬೇಕು. ನೀತಿ ಸಂಹಿತೆ ಉಲ್ಲಂಘನೆ, ಅಬಕಾರಿ ದಾಳಿ, ವಶಪಡಿಸಿಕೊಂಡಿರುವ ಮದ್ಯ ಹಾಗೂ ಹಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಿತ್ಯ ಗಮನಕ್ಕೆ ತರಬೇಕೆಂದು ಸೂಚನೆ ನೀಡಿದರು.

ಕುರುಗೋಡು ತಾಲೂಕಿನ ಬೈಲೂರು ಗ್ರಾಮದಲ್ಲಿ ಸದಸ್ಯ ಸ್ಥಾನಗಳ ಹರಾಜು ಮಾಡಿದ್ದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವುದು ಸೇರಿದಂತೆ ಇತರ ನೀತಿ ಸಂಹಿತೆ ಉಲ್ಲಂನೆ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಕೈಗೊಂಡಿರುವ ಸಿದ್ಧತೆ ಬಗ್ಗೆ ಪೊಲೀಸ್ ಅಧಿಕಾರಿಗಳು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು. ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರೆಹಾನ್ ಪಾಷಾ, ತಾಪಂ ಇಒ ಮಡಗಿನ ಬಸಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ವಾಗೀಶ ಶಿವಾಚಾರ್ಯ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net