ಘೋಷ್‌ರ ದಾರಿಯಲ್ಲಿ ಸಾಗೋಣ

08112022 bellary book exibition
Published on

ಬಳ್ಳಾರಿ: ಮಹಾನ್ ಮಾರ್ಕ್ಸ್‌ವಾದಿ ಚಿಂತಕರು, ಕಾರ್ಮಿಕ ವರ್ಗದ ಮಹಾನ್ ನಾಯಕ ಕಾಮ್ರೇಡ್ ಶಿವದಾಸ್ ಘೋಷ್ ಜನ್ಮ ಶತಮಾನೋತ್ಸವದ ಅಂಗವಾಗಿ ಮಂಗಳವಾರ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯಿಂದ ಗಾಂಧಿ ಭವನದ ಮುಂದೆ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ಪುಸ್ತಕ ಮಾರಾಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾರ್ಯದರ್ಶಿ ಕಾ.ರಾಧಾಕೃಷ್ಣ ಉಪಾಧ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತದ ನೆಲದಲ್ಲಿ ನೈಜ ಕಮ್ಯುನಿಸ್ಟ್ ಪಕ್ಷ ಎಸ್‌ಯುಸಿಐ(ಸಿ) ಸ್ಥಾಪನೆ ಮಾಡಿದ ಕಾಮ್ರೇಡ್ ಶಿವದಾಸ್ ಘೋಷ್ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಇಡೀ ದೇಶದಾದ್ಯಂತ ವರ್ಷಪೂರ್ತಿ ಅತ್ಯಂತ ಗೌರವದಿಂದ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಸಾಮಾನ್ಯ ಜನರ ಜೀವನ ಪರಿಸ್ಥಿತಿ ಅತ್ಯಂತ ಅಧೋಗತಿಗೆ ಹೋಗಿದೆ. ಬೆಲೆ ಏರಿಕೆ, ನಿರುದ್ಯೋಗ, ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅಗೌರವಗಳು, ಜೀವನ ಅವಶ್ಯಕ ವಸ್ತುಗಳ ಮೇಲೆ ಹಾಕಿರುವ ಜಿಎಸ್‌ಟಿ ಈ ರೀತಿ ಹಲವಾರು ಸಮಸ್ಯೆಗಳ ಸುಳಿಯಲ್ಲಿ ಜನರು ನಲಗುತ್ತಿವೆ. ಇಂತಹ ಸಮಸ್ಯೆಗಳಿಗೆ ಕೊನೆ ಹಾಕಲು ಇರುವ ಮಾರ್ಗ ಎಂದರೆ ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿವೊಂದೇ ಎಂದು ನಮಗೆ ಕಾ.ಶಿವದಾಸ್ ಘೋಷ್ ತೋರಿಸಿಕೊಟ್ಟಿದ್ದಾರೆ. ಹಾಗಾಗಿ ಅವರು ತೋರಿಸಿಕೊಟ್ಟಿರುವ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು.

ಜಿಲ್ಲಾ ಸಮಿತಿ ಸದಸ್ಯರಾದ ಡಾ.ಪ್ರಮೋದ್.ಎನ್, ಎ.ದೇವದಾಸ್, ಆರ್.ಸೋಮಶೇಖರ್ ಗೌಡ, ಗೋವಿಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net