ಬಳ್ಳಾರಿ ; ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಮನೆಗಳಲ್ಲಿ ಅಣಬೆ ಬೇಸಾಯ ಮಾಡಬಹುದಾಗಿದ್ದು, ಇದರಿಂದ ತಮ್ಮ ಕುಟುಂಬ ನಿರ್ವಹಣೆಗೆ ಆರ್ಥಿಕ ವೃದ್ಧಿಯಾಗುವುದು ಎಂದು ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ ಹೇಳಿದರು.
ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ರಚಿಸಿರುವ ಗ್ರಾಪಂ ಮಟ್ಟದ ಒಕ್ಕೂಟಗಳ ಮಹಿಳೆಯರಿಗೆ ಶನಿವಾರ ಹಮ್ಮಿಕೊಂಡಿದ್ದ 10 ದಿನಗಳ ಉಚಿತ ಅಣಬೆ ಬೇಸಾಯ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಗ್ರಾಪಂ ಒಕ್ಕೂಟಗಳಿಂದ ನಿರ್ವಹಿಸುತ್ತಿರುವ ಘನ ತ್ಯಾಜ ನಿರ್ವಹಣಾ ಘಟಕಗಳ ವಾಹನ ಚಾಲನಾ ತರಬೇತಿ ಪಡೆದ ಸ್ವ- ಸಹಾಯ ಗುಂಪಿನ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್‌ಗಳನ್ನು ವಿತರಿಸಲಾಯಿತು.