ಕಾಂಗ್ರೆಸ್ ಬಡವರ ವಿರೋಧಿ

Published on

ಬಳ್ಳಾರಿ; ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದ್ದು, ಬಡವರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಮಾಜಿ ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.

ಇಲ್ಲಿನ ಬಿಮ್ಸ್ ಆವರಣದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜನೌಷಧಿ ಕೇಂದ್ರಗಳನ್ನು ತೆರವು ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಬಡವರಿಗೆ ತುಂಬಾ ಅನುಕೂಲ ಇದೆ. ಜನೌಷಧಿ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ೆಟೋವಿದ್ದು ಇದರಿಂದ ಬಡವರ ಮತಗಳು ಬಿಜೆಪಿ ಪಕ್ಷಕ್ಕೆ ಹೋಗುತ್ತದೆ ಎಂಬ ದುರುದ್ದೇಶದಿಂದ ಕಾಂಗ್ರೆಸ್ ಸರ್ಕಾರ ಮುಚ್ಚಲು ಹೊರಟಿದೆ ಎಂದು ಕಿಡಿಕಾರಿದರು.

ಜನೌಷಧ ಕೇಂದ್ರ ಬಂದ್ ಮಾಡಿ, ಬಡವರ ಹೊಟ್ಟೆ ಹೊಡಿಯಬೇಡಿ. ರಾಜ್ಯದ ಮೆಡಿಕಲ್ ಮಾಫಿಯಾಗೆ ಸಹಾಯ ಮಾಡಲು ಜನೌಷಧ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net