ಹಕ್ಕುಪತ್ರಕ್ಕಾಗಿ ಮುಂದುವರೆದ ಸತ್ಯಾಗ್ರಹ

Published on

ಬಳ್ಳಾರಿ : ಅರಣ್ಯಭೂಮಿ ಹಾಗೂ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಪ್ರತಿಭಟನೆಯು ಮಂಗಳವಾರವೂ ಮುಂದುವರೆಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ ಮಾತನಾಡಿ, ಅರಣ್ಯ ಸಾಗುವಳಿದಾರರಿಗೆ ಹಕ್ಕು ಪತ್ರವನ್ನು ನೀಡದೆ ೂಮಿಯಿಂದ ವಂಚಿಸಲಾಗಿದೆ. ಅರ್ಜಿಗಳನ್ನು ಸ್ವೀಕೃತ ಹಾಗೂ ಹಿಂಬರಹವನ್ನು ನೀಡಿರುವುದಿಲ್ಲ. ಗ್ರಾಮಸಭೆ, ಅರಣ್ಯ ಹಕ್ಕು ಸಭೆ ನಡೆಸದೆ ಸುಳ್ಳು ದಾಖಲೆ ಸೃಷ್ಟಿಸಿ ಅರ್ಜಿಗಳನ್ನು ತಿರಸ್ಕರಿಸಿ ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದ ರೈತರನ್ನು ವಂಚಿಸಿ ಸಾಗುವಳಿ ಪತ್ರ ನೀಡಲು ನಿರಾಕರಿಸಲಾಗುತ್ತಿದೆ. ಬಗರ್ ಹುಕುಂ, ಅನಾದೀನ ಇತ್ಯಾದಿ ಸರ್ಕಾರದ ಜಮೀನಿನಲ್ಲಿ ಸಾಗುವಳಿ ಮಾಡಿ 51, 53, 57 ನಮೂನೆಗಳಲ್ಲಿ ಅರ್ಜಿ ಸಲ್ಲಿಸಿದ ಸುಮಾರು 11,000ಕ್ಕೂ ಹೆಚ್ಚಿನ ಬಡ ರೈತರಿಗೆ ಸಹ ಹಕ್ಕು ಪತ್ರವನ್ನು ನೀಡಿರುವುದಿಲ್ಲ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net