ಎಚ್‌ಐವಿ ನಿಯಂತ್ರಣಕ್ಕೆ ಸಹಕಾರ ಅಗತ್ಯ

Published on

ಬಳ್ಳಾರಿ : ಸಮುದಾಯದಲ್ಲಿ ಎಚ್‌ಐವಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಹೇಳಿದರು.

ನಗರದ ಬಿಡಿಎಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ವಿಮುಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಅಖಂಡ ಜಿಲ್ಲೆಯ ಧಮನಿತ ಮಹಿಳೆಯರಿಗೆ ಎಚ್‌ಐವಿ ಮತ್ತು ಏಡ್ಸ್ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ 40 ವರ್ಷಗಳಿಂದ ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟಗಳಲ್ಲಿ ಕಾಡುತ್ತಿರುವ ಎಚ್‌ಐವಿ ಏಡ್ಸ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಭಾಗಿಯಾಗುವ ಮೂಲಕ ತಳಮಟ್ಟದಿಂದಲೇ ಎಚ್‌ಐವಿ ನಿರ್ಮೂಲನೆಗೆ ಪಣತೊಡಬೇಕಿದೆ ಎಂದರು.

ಒಮ್ಮೆ ಎಚ್‌ಐವಿ ವೈರಸ್ ದೇಹದಲ್ಲಿ ಕಂಡುಬಂದರೆ ಜೀವನ ಪರ್ಯಂತ ಎಚ್‌ಐವಿ ಭಾದಿತರಾಗಿ ಇರುವ ಸನ್ನಿವೇಶ ಉಂಟಾಗುವುದಿರಿಅದ ಸಮುದಾಯದಲ್ಲಿ ಹೆಚ್ಚಿನ ಜಾಗೃತಿಯನ್ನು ಮೂಡಿಸುವ ಮೂಲಕ ಎಚ್‌ಐವಿ ಮುಕ್ತ ಸಮಾಜ ನಿರ್ಮಿಸಬೇಕೆಂದು ತಿಳಿಸಿದರು.

ಡಿಎಚ್‌ಒ ಡಾ.ವೈ.ರಮೇಶಬಾಬು ಮಾತನಾಡಿ, ಯುವ ಜನತೆಯಲ್ಲಿ ಎಚ್‌ಐವಿಯಿಂದಾಗುವ ಪರಿಣಾಮ ಹಾಗೂ ಹರಡುವಿಕೆಯ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಮುಖಾಂತರ ಸ್ವಾಸ್ತ್ಯ ಸಮಾಜ ನಿರ್ಮಾಸಲು ಶ್ರಮಿಸೋಣ ಎಂದು ಹೇಳಿದರು.

ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವಿಮುಕ್ತಿ ಸಂಘವು ನಿರಂತರವಾಗಿ ಜಾಗೃತಿ ನೀಡುವುದರ ಜತೆಗೆ ಸರಿಯಾದ ಸಮಯದಲ್ಲಿ ಧಮನಿತ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವುದು. ಪ್ರಸ್ತುತ ಸಂಘದ ಸದಸ್ಯರ ಸಂಖ್ಯೆ 3166 ಕ್ಕೆ ತಲುಪಿರುವುದೇ ಸಾಕ್ಷಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net