ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕರೊನಾ ಸೋಂಕು ದೃಢ

Corona Positive Case - Copy
Published on

ಬಳ್ಳಾರಿ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ನಾಲ್ವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 54 ವರ್ಷದ ವ್ಯಕ್ತಿ ಹಾಗೂ ಮುಂಬೈ ಮೂಲದ 45 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಒಪಿಜೆ ಸೆಂಟರ್‌ನಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದ 48 ಹಾಗೂ 34 ವರ್ಷದ ಇಬ್ಬರಿಗೆ ವೈರಸ್ ಇರುವುದು ದೃಢಪಟ್ಟಿದೆ.

ಜಿಂದಾಲ್ ಒಪಿಜೆ ಸೆಂಟರ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ಸೋಂಕಿತ ವ್ಯಕ್ತಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಮಂದಿ ಚೇತರಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಸದ್ಯ 20 ಪ್ರಕರಣಗಳು ಸಕ್ರಿಯವಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net