ಜನತಾ ಕರ್ಫ್ಯೂ ಪಾಲನೆ ಮಾಡಿ: ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಹೇಳಿಕೆ

B Sriramulu Minister
Published on

ಬಳ್ಳಾರಿ: ಕರೊನಾ ನಿಯಂತ್ರಿಸುವಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಪ್ರತಿಯೊಬ್ಬರೂ ಸಹಕಾರ ನೀಡಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.

ನಗರದಲ್ಲಿ ಮಂಗಳವಾರ ಪಾಲಿಕೆ ಚುನಾವಣೆಯ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಿರೋಧ ಪಕ್ಷದವರಿಗೆ ಟೀಕೆ ಮಾಡಲು ವಿಷಯವೇ ಇಲ್ಲ. ಹೀಗಾಗಿ ಅನವಶ್ಯಕ ಆರೋಪ ಮಾಡುತ್ತ್ತಿದ್ದಾರೆ. ಜನತಾ ಕರ್ಫ್ಯೂ ಜನರು ಕಟ್ಟುನಿಟ್ಟಾಗಿ ಪಾಲನೆ ಮಾಡಿ ಕರೊನಾ ವಿರುದ್ಧದ ಹೋರಾಟಕ್ಕೆ ಜೈ ಜೋಡಿಸಬೇಕು. ಚುನಾವಣೆ ಪ್ರಚಾರದ ವೇಳೆ ನನ್ನ ಮೇಲೆಯೂ ಕರೊನಾ ನಿಯಮ ಉಲ್ಲಂಘನೆ ಮಾಡಿದ ಆರೋಪವಿದೆ. ಆದರೂ ಕರೊನಾ ವಿಚಾರದಲ್ಲಿ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಲೇಬೇಕು. ಪಾಲಿಕೆಯ 39ವಾರ್ಡ್‌ಗಳ ಪೈಕಿ 27ರಲ್ಲಿ ಗೆಲ್ಲುತ್ತೇವೆ. ಇದು ಅಭಿವೃದ್ಧಿ ಪರ ಮತ ಹಾಕುವ ಚುನಾವಣೆಯಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net