ಬಾಲ್ಯವಿವಾಹ ಜಾಗೃತಿ ಮೂಡಿಸಿ

Published on

ಬಳ್ಳಾರಿ : ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಬಾಲ್ಯವಿವಾಹ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬಾಲ್ಯವಿವಾಹ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್ ಹೊಸಮನೆ ಹೇಳಿದರು.

ನಗರದ ಶ್ರೀಮೇಧ ಪದವಿ ಕಾಲೇಜು ಸಭಾಂಣದಲ್ಲಿ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮೇಧಾ ಡಿಗ್ರಿ ಕಾಲೇಜು, ರೀಚ್ ಸಂಸ್ಥೆ ಸಹಯೋಗದೊಂದಿಗೆ ಗುರುವಾರ ನಡೆದ ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಲ್ಯವಿವಾಹವು ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಹಾಗೂ ಪೋಕ್ಸೋ ಕಾಯ್ದೆ ಅನ್ವಯ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಇದ್ದು, ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನದಡಿ ಶೂನ್ಯ ಸಂಖ್ಯೆಗೆ ತರಬೇಕಾದಲ್ಲಿ ಕೇವಲ ಅಧಿಕಾರಿಗಳು, ಸಂಘ ಸಂಸ್ಥೆಗಳು ಮಾತ್ರ ಪ್ರಯತ್ನ ಮಾಡಿದರೆ ಸಾಲದು ಸಮುದಾಯ ಭಾಗವಹಿಸುವಿಕೆ ಹಾಗೂ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಬಳಿಕ ಬಾಲ್ಯವಿವಾಹ ನಿಷೇಧಿಸಲಾಗಿದೆ-ಎಚ್ಚರ ಎನ್ನುವ ಪೋಸ್ಟರ್ ಅನಾವರಣಗೊಳಿಸಿದರು. ಎಲ್.ಪಿ.ಒ. ಈಶ್ವರ್ ಬಾಲ್ಯವಿವಾಹದಿಂದ ಸಮಾಜದಲ್ಲಿ ಆಗುವ ದುಷ್ಪರಿಣಾಮಗಳು ಮತ್ತು ಮಕ್ಕಳ ಹಕ್ಕುಗಳ ಕುರಿತು ತಿಳಿಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net