ಬಳ್ಳಾರಿ : ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗ ಆಧರಿಸಿ ಬೆಳೆ ವಿಮೆ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತವೆ. ಆದರೆ, ಸರಿಯಾದ ಸಮಯಕ್ಕೆ ಬೆಳೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷೃ ಮಾಡಬಾರದು ಎಂದು ಎಡಿಸಿ ಮಹಮ್ಮದ್ ಎನ್. ಜುಬೇರ್ ಹೇಳಿದರು.
ಇಲ್ಲಿನ ಡಿಸಿ ಕಚೇರಿಯ ಸಭಾಂಗಣದಲ್ಲಿ ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಜನನ-ಮರಣ ನಾಗರಿಕ ನೊಂದಣಿ ಪದ್ಧತಿ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಹಾಗೂ ಇತರೆ ವಿಷಯಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಬೆಳೆ ವಿಮೆ ನಿಗದಿಗೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗವೇ ಆಧಾರ. ಇದರಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಇತರೆ ಮಾಹಿತಿ ಸಂಗ್ರಹಿಸಿ ನಮೂದಿಸಲು ಕ್ರಮವಹಿಸಬೇಕು ಎಂದರು.