ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ

Published on

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಏ.5 ಮತ್ತು 6 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಈ.ತುಕಾರಾಮ್ ಕ್ರೀಡಾ ಧ್ವಜರೋಹಣ ನೆರವೇರಿಸುವರು. ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಜೆ.ಎನ್.ಗಣೇಶ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡುವರು. ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಪ್ರತಿಜ್ಞಾ ವಿಧಿ ಭೋದಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಶಾಖೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net