ದಲಿತರ ಅನುದಾನ ಬಳಕೆ ಖಂಡನೀಯ

Published on

ಬಳ್ಳಾರಿ : ಎಸ್‌ಸಿಎಸ್ಪಿ ಹಾಗೂ ಟಿಎಸ್ಪಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೀಸಲಾಗಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆಗೆ ಖಂಡಿಸಿ, ಇಲ್ಲಿನ ಕನಕ ದುರ್ಗಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಜಿಲ್ಲಾ ಬಿಜೆಪಿ ಘಟಕದಿಂದ ಬೃಹತ್ ಮೆರವಣಿಗೆ ನಡೆಸಿ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಎಸ್‌ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನವನ್ನು ದಲಿತ, ವಾಲ್ಮೀಕಿ ಸಮಾಜದ ಸಾಮಾಜಿಕ ಶೈಕ್ಷಣಿಕ, ಆರ್ಥಿಕ, ಸಬಲೀಕರಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿ ಸಮಾಜದ ಅಭಿವೃದ್ಧಿ ಕಡೆಗಣಿಸಿದೆ. ಸಮಾಜದ ಅಭಿವೃದ್ಧಿ ಕುಂಠಿತಕ್ಕೆ ಕಾಂಗ್ರೆಸ್ ಪಕ್ಷವೇ ನೇರಹೊಣೆಯಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಕಳೆದ ಮೂರು ವರ್ಷದಲ್ಲಿ 37 ಸಾವಿರ ಕೋಟಿ ರೂ. ಹಣವನ್ನು ವಾಪಾಸ್ ಯೋಜನೆಗೆ ಮೀಸಲಿಡಿಬೇಕಾಗಿ ಹಾಗೂ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಅಲ್ಪಸಂಖ್ಯಾತರಿಗೆಂದೇ ಬಜೆಟ್‌ನಲ್ಲಿ ಪ್ರತ್ಯೇಕ ಸಾವಿರಾರು ಕೋಟಿ ರೂ. ಮೀಸಲಿಡಲಾಗಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಆ ಹಣ ಮುಟ್ಟುವುದಿಲ್ಲ. ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ಅಲ್ಲದೆ ಮತ್ತೇನು ಎಂಬುದಾಗಿ ಬಿಜೆಪಿ ಘಟಕ ಪ್ರಶ್ನಿಸಿತು. ಬಳಿಕ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net