ಕೇಂದ್ರ ಗೃಹ ಸಚಿವರ ರಾಜೀನಾಮೆ ಆಗ್ರಹ

Published on

ಬಳ್ಳಾರಿ: ಲೋಕಸಭಾ ಆಧಿವೇಶನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಹೇಳಿಕೆ ಖಂಡಿಸಿ ಇಲ್ಲಿನ ಕೆಇಬಿ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ(ಭೀಮವಾದ)ಸಂಘಟನೆಯಿಂದ ಸೋಮವಾರ ಪ್ರತಿಭಟಿಸಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಲಿಂಗಪ್ಪ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನ ಮಾಡುವುದು ಬಿಜೆಪಿಯ ಹಳೆಯ ಚಾಳಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಗಡಿಪಾರು ಮಾಡುವವರೆಗೂ ರಾಷ್ಟ್ರಾದ್ಯಂತ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವರಿಗಿಂತ ನಮಗೆ ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯವಾಗಿದೆ. ಪದೇ ಪದೇ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಅವಮಾನ ಮಾಡುವುದು ಸಹಿಸಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜೀನಾಮೆ ಪಡೆದು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net