ಬಳ್ಳಾರಿ : ನಿತ್ಯ ಯೋಗ ಮಾಡುವುದರಿಂದ ರೋಗಗಳು ದೂರವಾಗಿ ಆರೋಗ್ಯ ಸಂಪತ್ತು ಗಳಿಸಬಹುದು ಎಂದು ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿ ಹೇಳಿದರು.
ಇಲ್ಲಿನ ವುಂಕಿ ಮರಿಸಿದ್ದಮ್ಮ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿ ಮತ್ತು ಕನ್ನಡ ಚೈತನ್ಯ ವೇದಿಕೆಯ ಸಹಯೋಗದೊಂದಿಗೆ ಭಾನುವಾರ ಆಯೋಜಿಸಿದ್ದ ಗುರುವಂದನಾ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿಗೆ ಆಧುನಿಕ ಜೀವನದಲ್ಲಿ ಆಹಾರ ಪದ್ಧತಿ, ಜೀವನ ಶೈಲಿ ಬದಲಾಗಿದ್ದು ನಾನಾ ರೋಗಗಳಿಗೆ ಎಡೆಮಾಡಿಕೊಟ್ಟಿದೆ. ಅದಕ್ಕಾಗಿ ಪ್ರತಿದಿನ ಯೋಗ ಮಾಡುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.
ಪತಂಜಲಿ ಯೋಗ ಸಮಿತಿ ಜಿಲ್ಲಾಧ್ಯಕ್ಷ ಪೊಂಪನಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ಪ್ರತಿಯೊಂದು ವಾರ್ಡ್‌ಗಳಲ್ಲಿ ಯೋಗ ಸ್ಥಾಪಿಸಿಲಾಗುವುದು ಎಂದು ಹೇಳಿದರು.