ನಾಯಕತ್ವ ಗುಣ ಬೆಳೆಸಿಕೊಳ್ಳಿ

Published on

ಬಳ್ಳಾರಿ: ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಮೋಕ ಹೇಳಿದರು.

ತಾಲೂಕಿನ ತೆಕ್ಕಲಕೋಟೆ ಶ್ರೀಮತಿ ಹೊನ್ನೂರಮ್ಮ ದಿ.ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಭಾರತ ಯೂತ್ ಪಾರ್ಲೆಮೆಂಟ್-2025ರ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪರಿಚಯಿಸಿರುವ ಭಾರತ ಯೂತ್ ಪಾರ್ಲೆಮೆಂಟ್ ಯೋಜನೆ ಉತ್ತಮವಾಗಿದೆ. ಯುವ ಜನಾಂಗ ಸದುಪಯೋಗ ಪಡೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಯುವ ಜನ ಮತ್ತ ಕ್ರಿಡಾ ಇಲಾಖೆ ಹಾಗೂ ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯ ಹಾಗೂ ಬಳ್ಳಾರಿ ನೆಹರೂ ಯುವ ಕೇಂದ್ರದಿಂದ ನಮ್ಮ ಕಾಲೇಜು ಆಯ್ಕೆ ಆಗಿರುವುದು ಸಂತೋಷವಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net