ಬಳ್ಳಾರಿ ; ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಹೇಳಿದರು.
ನಗರದ ಡಿಸಿ ಕಚೇರಿ ಆವರಣದಲ್ಲಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಭಾರತ ಸುಗಮ್ಯ ಯಾತ್ರಾ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಗವಿಕಲರು ಸರ್ಕಾರಿ ಕಚೇರಿಗಳಲ್ಲಿ ಅವರಿಗಿರುವ ಸೌಲಭ್ಯಗಳ ಮಾಹಿತಿ ಹೊಂದಬೇಕು. ಮುಖ್ಯವಾಗಿ ಅವರಿಗೆ ಯಾವುದೇ ಅಡೆತಡೆ ಇಲ್ಲದಂತೆ ಓಡಾಡಲು ಪೂರಕ ಪರಿಸರ ಕಲ್ಪಿಸಿಕೊಟ್ಟು ಮುಖ್ಯವಾಹಿನಿಗೆ ಬರುವಂತೆ ನೋಡಿಕೊಳ್ಳಬೇಕು ಎಂದರು.