ಗರ್ಭಿಣಿಯರಿಗೆ ಪೌಷ್ಟಿಕಯುಕ್ತ ಆಹಾರ ವಿತರಣೆ

Published on

ಬಳ್ಳಾರಿ : ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರ ತಪಾಸಣೆಯೊಂದಿಗೆ ಪೌಷ್ಟಿಕಯುಕ್ತ ಆಹಾರ ಒದಗಿಸುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತಿ ತಿಂಗಳ 09 ಮತ್ತು 24ನೇ ತಾರೀಖುನಂದು ಗಂಡಾಂತರ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವ ಕಾರ್ಯ ನಿರಂತರವಾಗಿ ಜರುಗುತಿದ್ದು, ಇದೇ ಮೊದಲ ಬಾರಿಗೆ ಗ್ರಾಮೀಣ ಮತ್ತು ನಗರ ಭಾಗದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಗೆ ಆಗಮಿಸಿದ ಗರ್ಭಿಣಿಯರಿಗೆ ಪ್ರಾಯೋಗಿಕವಾಗಿ ಜಿಲ್ಲಾಡಳಿತ ಸಲಹೆಯಂತೆ ಪೌಷ್ಟಿಕಯುಕ್ತ ಆಹಾರ ಒಳಗೊಂಡ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net