ಸಮಸ್ಯೆಗಳತ್ತ ಗಮನ ಹರಿಸಲಾಗುವುದು; ಉಗ್ರಾಣ ನಿಗಮದ ಹಮಾಲರಿಗೆ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಭರವಸೆ

03042022 Bellary Minister B sriramulu visit
Published on

ಬಳ್ಳಾರಿ: ಉಗ್ರಾಣ ನಿಗಮದ ಹಮಾಲರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದ ಎಪಿಎಂಸಿ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮಕ್ಕೆ ಭಾನುವಾರ ಭೇಟಿ ನೀಡಿ, ಸಮಸ್ಯೆಗಳ ಅಲಿಸಿ ನಂತರ ಮಾತನಾಡಿದರು. ಹಮಾಲಿಗಳ ಸಮಸ್ಯೆಗಳು ಬೆಟ್ಟದಷ್ಟು ಇವೆ. ಅವುಗಳನ್ನು ಒಂದೊಂದೇ ಆಗಿ ಪರಿಹರಿಸಲು ಕ್ರಮ ವಹಿಸಲಾಗುವುದು. ಹಮಾಲಿಗಳಿಗೆ ನೀರಿನ ವ್ಯವಸ್ಥೆ ಹಾಗೂ ನಿವೇಶನ ಹಂಚಿಕೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಸರ್ಕಾರ ಉದ್ದೇಶ ರೈತರಿಗೆ ಮತ್ತು ಹಮಾಲಿಗಳಿಗೆ ತೊಂದರೆಯಾಗಬಾರದು. ಆದ್ದರಿಂದ ನಿಮ್ಮ ಎಲ್ಲ ಸಮಸ್ಯೆಗಳನ್ನು ಬಹಳ ಕಡಿಮೆ ಅವಧಿಯಲ್ಲಿ ಬಗೆಹರಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ್, ಮಾಜಿ ಸಂಸದರಾದ ಸಣ್ಣ ಫಕೀರಪ್ಪ, ಜೆ.ಶಾಂತಾ, ಎಪಿಎಂಸಿ ಅಧ್ಯಕ್ಷ ಉಮೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net