ಸಮೀಕ್ಷೆಯಿಂದ ಹೊರಗುಳಿಯಬೇಡಿ

Published on

ಬಳ್ಳಾರಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಮೀಕ್ಷೆಯಿಂದ ಯಾರು ದೂರ ಉಳಿಯಬೇಡಿ ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಇಲ್ಲಿನ ವೆಂಕಟಮ್ಮ ಕಾಲನಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಡೆಸುವ ಸಮೀಕ್ಷಾ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. 60 ಪ್ರಶ್ನಾವಳಿಯ ಸಮೀಕ್ಷಾ ಕಾರ್ಯವು ಆ್ಯಪ್ ಮೂಲಕ ನಡೆಯಲಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಸಮೀಕ್ಷಾ ಕಾರ್ಯಕ್ಕೆ ತರಬೇತಿ ಪಡೆದ ಮಾಸ್ಟರ್ ಟ್ರೇನರ್‌ಗಳು ತಮ್ಮ ಕೆಳಹಂತದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಮಾರ್ಗದರ್ಶನ ಮಾಡಲಾಗಿದೆ. ಪ್ರತಿ 108 ಮನೆಗಳಿಗೆ ಒಬ್ಬ ಗಣತಿದಾರ, 20 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರಂತೆ ನೇಮಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಯಾವ ಕುಟುಂಬವೂ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರದಿಂದ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net