ಬಳ್ಳಾರಿ : ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಆದರ್ಶ ಜೀವನ ರೂಪಿಸಿಕೊಳ್ಳಬೇಕು ಎಂದು ಕಾಲೇಜು ಪ್ರಾಂಶುಪಾಲ ಡಾ.ಡಿ. ಸುಧಾಕರ್ ಹೇಳಿದರು.
ನಗರದ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೇಂದ್ರ ಸರ್ಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಡೆದ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾದಕ ವಸ್ತುಗಳ ಸೇವನೆಯಿಂದ ದೇಹಕ್ಕೆ ಅತ್ಯಂತ ತೀವ್ರವಾದ ಅಡ್ಡ ಪರಿಣಾಮ ಬೀರುತ್ತಿದ್ದು, ಹೆಚ್ಚಾಗಿ ಆರೋಗ್ಯದ ಅಪಾಯಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.