ಧೈರ್ಯದಿಂದ ವಾಹನ ಚಲಾಯಿಸಿ

Published on

ಬಳ್ಳಾರಿ : ಮಹಿಳೆಯರು ಧೈರ್ಯದಿಂದ ವಾಹನ ಚಲಾಯಿಸುವ ತರಬೇತಿಯನ್ನು ಆಸಕ್ತಿ ವಹಿಸಿ ಕಲಿಯಬೇಕು ಎಂದು ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹೇಳಿದರು.

ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಪಂ ಸಹಯೋಗದೊಂದಿಗೆ ಎನ್‌ಆರ್‌ಎಲ್‌ಎಂ ಯೋಜನೆಯಡಿ ಶುಕ್ರವಾರ ಆಯೋಜಿಸಿದ್ದ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ವಾಹನಗಳಿಗೆ ಎಸ್‌ಎಚ್‌ಜಿ ಮಹಿಳೆಯರು ಹಾಗೂ ಪುರುಷರಿಗೆ ಲಘು ವಾಹನ ಚಾಲನಾ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರಿಗೆ ಸಮಾನತೆ ಇದ್ದು, ಸರ್ಕಾರದ ವಿವಿಧ ಯೋಜನೆಗಳು ಬಳಿಸಿಕೊಂಡು ಎಲ್ಲ ಕ್ಷೇತ್ರಗಳಲ್ಲಿ ಮುನ್ನೆಡೆಯಬೇಕು ಎಂದರು.

ಗ್ರಾಪಂ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಗಳಿಗೆ ವಾಹನ ಚಾಲಕಿಯರನ್ನಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಅದರಂತೆ, ಯುವಕರು ಸಹ ಜೀವನ ನಿರ್ವಹಣೆಗಾಗಿ ಲಘು ವಾಹನಾ ಚಾಲನೆಯನ್ನು ಸ್ವ-ಉದ್ಯೋಗವನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎಚ್.ಎರಿಮನಿ ಮಾತನಾಡಿ, ಸಂಸ್ಥೆಯಲ್ಲಿ ಕೌಶಲ ತರಬೇತಿ ಜತೆಗೆ ವ್ಯಕ್ತಿತ್ವ ವಿಕಸನ, ಆತ್ಮ ವಿಶ್ವಾಸ, ಸ್ವ-ಉದ್ಯೋಗಕ್ಕೆ ಮಾರ್ಗದರ್ಶನ ನೀಡಲಾಗುತ್ತದೆ. ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net