ದಸರಾ ಹಿನ್ನೆಲೆ ಖರೀದಿ ಜೋರು

Published on

ಬಳ್ಳಾರಿ : ಜಿಲ್ಲೆಯಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ - ಸಡಗರಕ್ಕೆ ನಾಗರಿಕರು, ನಗರದ ಮಾರುಕಟ್ಟೆಗಳಲ್ಲಿ ಹೂವು ಮತ್ತು ಹಣ್ಣಿನ ಖರೀದಿ ನಡೆಸಿದರು.

ನವರಾತ್ರಿ ಆಚರಣೆಯ ವೇಳೆ ಪ್ರತಿ ವರ್ಷ ಹೂವುಗಳ ದರ ಏರಿಕೆ ಆಗುತ್ತದೆ. ಆದರೆ, ಕೆಲ ದಿನಗಳ ಹಿಂದೆ ಹೂವಿನ ದರ ಕುಸಿದಿತ್ತು. ಹಬ್ಬದ ವೇಳೆಗೆ ಮತ್ತೆ ಹೂವಿನ ದರಗಳು ಹೆಚ್ಚಾಗಿವೆ. ಹಬ್ಬದ ಹಿನ್ನೆಲೆ ಸೇವಂತಿಗೆ, ಕನಕಾಂಬರ, ಗುಲಾಬಿ, ಹೂವುಗಳಿಗೆ ಹೆಚ್ಚಿನ ಬೇಡಿಕೆಯಿತ್ತು. ಆಯುಧ ಪೂಜೆ ದಿನ ವಾಹನಗಳು , ಕಚೇರಿ ಮನೆಯಲ್ಲಿರುವ ವಸ್ತುಗಳನ್ನು ಅಲಂಕಾರಿಸಿ ಪೂಜೆ ಮಾಡಲಾಗುತ್ತಿದೆ. ಗುಣಮಟ್ಟದ ಹೂವಿಗೆ ಗ್ರಾಹಕರಿಂದ ಬೇಡಿಕೆ ಹೆಚ್ಚು, ಹೀಗಾಗಿ ಬೆಲೆ ಏರಿಕೆ ಸಾಮಾನ್ಯವಾಗಿತ್ತು. ಅಲ್ಲದೆ, ತರಕಾರಿ, ದಿನಸಿ, ಅಲಂಕಾರಿಕ ವಸ್ತುಗಳು ಮತ್ತು ಪೂಜೆಗೆ ಬೇಕಾಗುವ ಬೂದುಗುಂಬಳ, ಬಾಳೆಕಂದು, ಎಲೆ, ತೆಂಗಿನಕಾಯಿ ಖರೀದಿ ಜೋರಾಗಿತ್ತು. ಮಾರುಕಟ್ಟೆ ಪ್ರದೇಶ ಜನಜಂಗುಳಿಯಿಂದ ಕೂಡಿದ್ದವು.

====

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net