ಬಳ್ಳಾರಿ : ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮತ ಎಣಿಕೆ ಕೇಂದ್ರಗಳಿಗೆ ಚುನಾವಣಾಧಿಕಾರಿ ಎಚ್.ಡಿ.ರಾಜೇಶ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ನ.23 ರಂದು ಬೆಳಗ್ಗೆ 08 ಗಂಟೆಗೆ ಮತ ಎಣಿಕಾ ಕಾರ್ಯ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂ ಗಳನ್ನು ತೆರೆಯುವುದು, ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆಗೆ ಸಿದ್ಧ ಮಾಡಿಕೊಳ್ಳುವುದು, ಮತ ಎಣಿಕಾ ಕಾರ್ಯ ನೆರವೇರಿಸುವ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಮತ್ತು ಏಜೆಂಟರುಗಳ ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.
ಈಗಾಗಲೇ ಮತ ಎಣಿಕಾ ಕೊಠಡಿಗಳನ್ನು ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‌ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಪರಿಶೀಲಿಸಿದರು.