ತುರ್ತು ನೀರಾವರಿ ಸಲಹಾ ಸಮಿತಿ ಸಭೆ

Published on

ಬಳ್ಳಾರಿ: ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತುಂಗಾಭದ್ರಾ ಯೋಜನೆಯ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕೆಳ ಮಟ್ಟದ ಕಾಲುವೆಯಡಿ ಹಿಂಗಾರು ಹಂಗಾಮಿಗೆ ಬೆಳೆದು ನಿಂತ ಬೆಳೆಗಳಿಗೆ ಕೊರತೆಯಾಗುವ ನೀರನ್ನು ಒದಗಿಸಲು ಮತ್ತು ಹಿಂಗಾರು ಹಂಗಾಮಿನಲ್ಲಿ ಲಭ್ಯವಾದ, ಬಳಕೆಯಾದ ಮತ್ತು ಉಳಿತಾಯವಾಗುವ ನೀರನ್ನು ನಿಂತ ಬೆಳೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ಮಾ.21 ರಂದು ಸಂಜೆ 4 ಗಂಟೆಗೆ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ಎಸ್ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net