ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ

Published on

ಬಳ್ಳಾರಿ : ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ ಎನ್.ಹೊಸಮನೆ ಹೇಳಿದರು.

ನಗರದ ಬಿಡಿಸಿಸಿ ಕಚೇರಿಯ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದೊಂದಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ವ್ಯಾಪಾರಿ- ವಾಣಿಜ್ಯೋದ್ಯಮಿಗಳ ಸೌಹಾರ್ದ ಸಭೆ ಉದ್ಘಾಟಿಸಿ ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದು, ಶಿಕ್ಷಣದ ಮೂಲಕವೇ ಈ ಸಮಸ್ಯೆಗೆ ಪರಿಹಾರ ಸಾಧ್ಯ. ಅಧಿಕಾರಿಗಳು ಮತ್ತು ವ್ಯಾಪಾರಿ- ಉದ್ಯಮಿಗಳು ಪರಸ್ಪರ ಮಾನವೀಯತೆಯ ಆಧಾರದಲ್ಲಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ತಿಳಿಸಿದರು.

ಬಿಡಿಸಿಸಿ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ, ಕಾರ್ಮಿಕ ಇಲಾಖೆ ಮತ್ತು ವ್ಯಾಪಾರ-ವಾಣಿಜ್ಯೋದ್ಯಮಿಗಳು ಪರಸ್ಪರ ಸಹಕಾರದಿಂದ ಇದ್ದಲ್ಲಿ ಮಾತ್ರ ಬಾಲಕಾರ್ಮಿಕ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಾಧ್ಯ. ಪ್ರತಿ ಮೂರು ಅಥವಾ ಆರು ತಿಂಗಳಿಗೆ ವ್ಯಾಪಾರಿ ಮತ್ತು ಉದ್ಯಮಿಗಳಿಗೆ ಅರಿವು ಕಾರ್ಯಾಗಾರ ಏರ್ಪಡಿಸಬೇಕು. ಕಾರ್ಮಿಕ ಇಲಾಖೆಯು ಕಾಲ ಕಾಲಕ್ಕೆ ಸಭೆ ನಡೆಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net