ಕಾನೂನಿನಡಿ ಎಲ್ಲರೂ ಸಮಾನರು

Published on

ಬಳ್ಳಾರಿ ; ಕಾನೂನಿನಡಿ ಎಲ್ಲ ಮಾನವರು ಸಮಾನರು ಎಂಬ ಪರಿಕಲ್ಪನೆಯಲ್ಲಿ ನಡೆದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ ಎನ್. ಹೊಸಮನೆ ಹೇಳಿದರು.

ಇಲ್ಲಿನ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾನತೆ ಮತ್ತು ಸ್ವಾತಂತ್ರ್ಯ ಇವೆರಡು ದೇಶದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ನಿಜವಾದ ಸಾಮಾಜಿಕ ಸಮಾನತೆ ದೊರೆಯುತ್ತದೆ. ಅಸಮಾನತೆಯನ್ನು ತೊಲಗಿಸಬೇಕೆಂದರೆ ಸಮಾನತೆಯ ಹಂಚಿಕೆಯನ್ನು ಕ್ರಮವಾಗಿ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ ಅವರು ಜಾತಿ ನಿಂದನೆ, ಅವಮಾನ-ಅಪಮಾನಗಳಂತಹ ಕಷ್ಟ-ಕಾರ್ಪಾಣ್ಯಗಳನ್ನು ಸಹಿಸಿಕೊಂಡು ಕೇವಲ ವಿದ್ಯಾರ್ಜನೆಯಿಂದ ಬದಲಾವಣೆ ಎಂಬುದು ಅರಿತುಕೊಂಡು ಶ್ರೇಷ್ಠ ವ್ಯಕ್ತಿಯಾದರು. ಪ್ರಸ್ತುತ ಜಗತ್ತಿನಲ್ಲಿ ಬಡವ ಮತ್ತು ಶ್ರೀಮಂತ ಎಂಬ ಎರಡು ಜಾತಿಯಿವೆ. ಜ್ಞಾನಾರ್ಜನೆಯಿಂದ ಆರ್ಥಿಕವಾಗಿ ಸಬಲರಾದರೆ ಎಲ್ಲರೂ ನಿಮ್ಮ ಹಿಂದೆ ಬರುತ್ತಾರೆ ಎಂದು ಕಿವಿ ಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net