ಪ್ರತಿಯೊಬ್ಬರು ಸಂವಿಧಾನ ಗೌರವಿಸಿ

Published on

ಬಳ್ಳಾರಿ : ಸಮಾಜದಲ್ಲಿನ ಪ್ರತಿಯೊಬ್ಬ ನಾಗರಿಕರನ್ನು ಗೌರವದಿಂದ ಕಾಣುವುದರೊಂದಿಗೆ ತಾಯಿ ಮಗುವಿನ ಆರೋಗ್ಯ ಸೇರಿದಂತೆ ಎಲ್ಲ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ತಡೆಗೆ ಶ್ರಮಿಸೋಣ ಎಂದು ಡಿಎಚ್‌ಒ ಡಾ.ವೈ. ರಮೇಶಬಾಬು ಹೇಳಿದರು.

ನಗರದ ಡಿಎಚ್‌ಒ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ದೇಶದ ಸಮಗ್ರತೆಯನ್ನು ಎಲ್ಲರ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಸ್ಥಾನಮಾನಗಳು ಸಮಾನವಾಗಿರಬೇಕು ಎಂಬ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಯಾವುದೇ ಬೇಧಭಾವಿಲ್ಲದೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಎಲ್ಲ ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದನೆ ಮಾಡಬೇಕು ಎಂದರು.

ಸಂವಿಧಾನದ ಆಶಯಗಳನ್ನು ಗೌರವಿಸುವ ಮೂಲಕ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ತಾಯಿ ಮಗುವಿನ ಕಾಳಜಿಗಾಗಿ ಗುಣಮಟ್ಟದ ಸೇವೆಗಳನ್ನು ನೀಡಿ ಜಿಲ್ಲೆಯನ್ನು ಆರೋಗ್ಯಯುತ ಜಿಲ್ಲೆಯನ್ನಾಗಿ ಮಾಡಲು ಕೈಜೋಡಿಸೋಣ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net