ಬಳ್ಳಾರಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನ.10 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====